ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಕ್ಕಳ ಆರೋಗ್ಯ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ರಾಯಚೂರು ಜಿಲ್ಲೆಯಲ್ಲೂ ವಿಶೇಷ ಆರೋಗ್ಯ ಸೇವಾ ವ್ಯವಸ್ಥೆ ಜಾರಿಗೆ ಆಗ್ರಹ

Advertisement

ಸಿಂಧನೂರು, ಜೂನ್ 22: ರಾಯಚೂರು ಜಿಲ್ಲೆಯ ಗ್ರಾಮೀಣ ಭಾಗಗಳ ಮಕ್ಕಳ ಹಾಗೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಜಿಲ್ಲಾ ಆಡಳಿತ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತುರ್ತಾಗಿ ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

Advertisement

news_1780812301_0_598.webp

ಸಿಂಧನೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ದೂರದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟ, ಸಮಯದ ಅಭಾವ ಹಾಗೂ ಪ್ರಯಾಣದ ತೊಂದರೆಗಳನ್ನು ಎದುರಿಸುತ್ತಿವೆ. ವಿಶೇಷವಾಗಿ ನವಜಾತ ಶಿಶುಗಳು ಹಾಗೂ ಮಕ್ಕಳ ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ದೂರದ ಆಸ್ಪತ್ರೆಗೆ ಸಾಗಿಸುವುದು ಪೋಷಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

news_1782118094_0_767.webp

ಈ ಹಿನ್ನೆಲೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ (Empanelled) ಆಸ್ಪತ್ರೆಗಳಿಗೆ ನೇರ ಚಿಕಿತ್ಸಾ ಅನುಮತಿ ನೀಡುವ ಹಾಗೂ ಸರ್ಕಾರಿ ಆಸ್ಪತ್ರೆಗಳಿಂದ ರೋಗಿಗಳನ್ನು ಶಿಫಾರಸು ಮಾಡಲು ಅವಕಾಶ ಕಲ್ಪಿಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಚಿಕಿತ್ಸಾ ಸೇವೆಗಳನ್ನು ನೇರವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದೇ ಮಾದರಿಯನ್ನು ರಾಯಚೂರು ಜಿಲ್ಲೆಯಲ್ಲೂ ಜಾರಿಗೊಳಿಸಿದರೆ ಮಕ್ಕಳಿಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ದೊರೆಯಲಿದ್ದು, ಬಡ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಮತ್ತು ಅನಗತ್ಯ ಪ್ರಯಾಣದ ತೊಂದರೆ ಕಡಿಮೆಯಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

news_1782118098_0_905.webp

ಮಕ್ಕಳ ಆರೋಗ್ಯ ಮತ್ತು ಜೀವ ರಕ್ಷಣೆಯು ಮೂಲಭೂತ ಹಕ್ಕಾಗಿರುವುದರಿಂದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

news_1778905892_0_440.webp

ರಾಯಚೂರು ಜಿಲ್ಲೆಯಲ್ಲಿಯೂ ರಾಜ್ಯದ ಇತರೆ ಜಿಲ್ಲೆಗಳ ಮಾದರಿಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಿಗೆ ನೇರ ಚಿಕಿತ್ಸಾ ಅನುಮತಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಂದ ರೋಗಿಗಳ ಶಿಫಾರಸಿಗೆ ಅವಕಾಶ ಕಲ್ಪಿಸುವ ವ್ಯವಸ್ಥೆ ಜಾರಿಯಾದರೆ, ಸಾವಿರಾರು ಗ್ರಾಮೀಣ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಮಕ್ಕಳ ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!ಸಿಂಧನೂರಿನಲ್ಲಿ ಬಾಲ ಭಿಕ್ಷಾಟನೆ ವಿರುದ್ಧ ಕಾರ್ಯಾಚರಣೆ: ಇಬ್ಬರು ಬಾಲಕಿಯರ ರಕ್ಷಣೆಷೇರು ಮಾರುಕಟ್ಟೆ ಸಂಶೋಧನೆಗೆ ಕಲೀಲ್‌ಗೆ ಡಾಕ್ಟರೇಟ್ಹೊಟ್ಟೆಗೆ ಅನ್ನ ನೀಡುವ ರೈತನಿಗಾಗಿ ನಾವು ಧ್ವನಿ ಎತ್ತದಿದ್ದರೆ ಇನ್ನಾರಿಗಾಗಿ?ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್‌ಗೆ ಜಯಸಿಂಧನೂರು ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ ಸಿಂಧನೂರಿನಲ್ಲಿ ಅಪರೂಪದ ವೈದ್ಯಕೀಯ ಪ್ರಕರಣ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣದಂತಿರುವ ರಚನೆ ಪತ್ತೆ!ಅಚ್ಚರಿಯ ಘಟನೆ: ಕಪ್ಪು ಎಮ್ಮೆಗೆ ಬಿಳಿ ಬಣ್ಣದ ಹೋರಿ ಕರು ಜನನ!ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಮಾರ್ಫಿಂಗ್ ಆರೋಪ: ಸಿಂಧನೂರಿನಲ್ಲಿ ವ್ಯಕ್ತಿ ಬಂಧನಕೊಪ್ಪಳದಿಂದ ಸಿಂಧನೂರಿಗೆ ಜೀವ ಉಳಿಸಿದ 60 ನಿಮಿಷಗಳು!