ಬಡವರ ಬಾರುಕೋಲು ಸುದ್ದಿ
ಮಸ್ಕಿ : ಪಟ್ಟಣದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸಭೆ ಜಿಲ್ಲಾಧ್ಯಕ್ಷ ಅಲ್ಲಾಭಕ್ಷ ನೇತೃತ್ವದಲ್ಲಿ ನಡೆಯಿತು.
ಈ ಸಭೆಯಲ್ಲಿ ಭಾಗವಹಿಸಿದ್ದ ಸರ್ವರು ತಮ್ಮ ಒಮ್ಮತದ ಮೂಲಕ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಮಸ್ಕಿ ತಾಲೂಕು ಅಧ್ಯಕ್ಷರಾಗಿ ಪ್ರಶಾಂತ್ ಮುರಾರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಲ್ಲಾಭಕ್ಷ ಹೇಳಿದರು.
ಇದಲ್ಲದೆ ಮಸ್ಕಿ ತಾಲೂಕು ಪದಾಧಿಕಾರಿಗಳನ್ನು ಸಹ ಆಯ್ಕೆ ಮಾಡಲಾಗಿ ಉಪಾಧ್ಯಕ್ಷರಾಗಿ ಪ್ರಕಾಶ್ ಪಾಟೀಲ್,ಪ್ರಧಾನ ಕಾರ್ಯದರ್ಶಿಯಾಗಿ ವಿಜಯಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ನರಸಪ್ಪ,ಸಹಕಾರ್ಯದರ್ಶಿಯಾಗಿ ತಿರುಕನಗೌಡ,ಖಜಾಂಚಿಯಾಗಿ ರವಿಕುಮಾರ್ ಬಡಿಗೇರ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಅವರು ತಿಳಿಸಿದರು.
ನಂತರ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅಲ್ಲಾಭಕ್ಷ ಅವರು,ವಿದ್ಯುತ್ ಗುತ್ತಿಗೆದಾರ ಹಿತ ರಕ್ಷಣೆ ಕಾಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಹಾಗೂ ನಮ್ಮ ಎಲ್ಲಾ ವಿದ್ಯುತ್ ಗುತ್ತಿಗೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮಸ್ಯೆಗಳನ್ನು ನಿವಾರಿಸುವ ಕೆಲಸ ಅಧ್ಯಕ್ಷರಾದವರು ಮತ್ತು ನೂತನ ಪದಾಧಿಕಾರಿಗಳು
ವರದಿ : ಎಚ್.ಕೆ.ಬಡಿಗೇರ್
ಕೆಲಸದ ವೈದ್ಯರನ್ನು ಮತ್ತು ಸಿಬ್ಬಂದಿಗಳನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸಲು ಒತ್ತಾಯಿಸಿ ಅನಿರ್ದಿಷ್ಟ ಹೋರಾಟ