ರಾಯಚೂರು,ಮೇ.೦೫ ಪ್ರಸ್ತುತ ಬೇಸಿಗೆ ಹಿನ್ನಲೆಯಲ್ಲಿ ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟ್ರೋಕ್ (ಶಾಖದ ಹೊಡೆತ) ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹೊರಗಡೆ ಕೆಲಸ ನಿರ್ವಹಿಸುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ, ಬೀದಿ ಬದಿ ವ್ಯಾಪಾರಸ್ಥರ, ವಾಹನ ಚಾಲಕರ ಮತ್ತು ಇತರೆ ವರ್ಗದ ಎಲ್ಲಾ ಕೆಲಸಗಾರರ ಆರೋಗ್ಯವನ್ನು ಕಾಪಾಡುವ ಮತ್ತು ಸುರಕ್ಷತೆಯನ್ನು ಒದಗಿಸುವ ದೃಷ್ಟಿಯಿಂದ ರಾಯಚೂರು ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣದಾರ ಮತ್ತು ಇತರೆ ಉದ್ದಿಮೆಗಳ ಮಾಲಿಕರಿಗೆ ಮತ್ತು ಕಾರ್ಮಿಕರಿಗೆ ಈ ಕೆಳಕಂಡ ಸಲಹೆ-ಸೂಚನೆಗಳನ್ನು ನೀಡಿ ಮುಂದಿನ ದಿನಗಳಲ್ಲಿ ತಮ್ಮ ಸುರಕ್ಷತೆಯನ್ನು ಕಾಪಾಡುವ ಹಿನ್ನಲೆಯಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ತಂಪಾದ ಕುಡಿಯುವ ನೀರು ಮತ್ತು ಎಲೆಕ್ಟ್ರೋಲೈಟ್ ಪೂರಕಗಳ ವ್ಯವಸ್ಥೆಯನ್ನು ಮಾಲೀಕರು ಮಾಡಬೇಕು. ಡಿ-ಹೈಡ್ರೇಟೆಡ್ ಆಗದಿರಲು ಕಾರ್ಮಿಕರು ಮತ್ತು ಎಲ್ಲರೂ ಪ್ರತಿ ೨೦ ನಿಮಿಷಗಳಿಗೊಮ್ಮೆ ಅಥವಾ ಹೆಚ್ಚು ಭಾರಿ ನೀರನ್ನು ಕುಡಿಯುವಂತೆ ಹಾಗೂ ಕೆಲಸದ ಮದ್ಯದಲ್ಲಿ ವಿಶ್ರಾಂತಿ ಪಡೆದು ಕೆಲಸ ಮಾಡಲು ಗಮನ ವಹಿಸಬೇಕು.
ಶ್ರಮದಾಯಕ ಮತ್ತು ಹೊರಾಂಗಣ ಚಟುವಟಿಕೆಗಳನ್ನು ತಾಪಮಾನ ಕಡಿಮೆ ಇರುವ ಸಮಯದಲ್ಲಿ, ಅಂದರೆ ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವುದು. ಆದಷ್ಟು ಕಾರ್ಮಿಕರು ಬೆಳಿಗ್ಗೆ ೧೧ ರಿಂದ ಸಂಜೆ ೦೪ ರವರೆಗೆ ನೇರ ಸೂರ್ಯನ ಬಿಸಿಲಿನಲ್ಲಿ ಕೆಲಸ ನಿರ್ವಹಿಸದಂತೆ ಮಾಲೀಕರು ಎಚ್ಚರ ವಹಿಸುವುದು. ಸಾಧ್ಯವಾದಲ್ಲಿ ಬೃಹತ್ ಕಟ್ಟಡ ಮತ್ತು ಇತರೆ ನಿರ್ಮಾಣದಾರರು ಕೆಲಸದ ಪಾಳಿಯನ್ನು ರಾತ್ರಿ ವೇಳೆ ಮಾಡಬಹುದಾಗಿರುತ್ತದೆ.
ಹೆಚ್ಚಿನ ಬಿಸಿಲಿನ ತಾಪಮಾನವಿರುವ ಸಮಯದಲ್ಲಿ ಕಾರ್ಮಿಕರಿಗೆ ಕೆಲಸ ಮಾಡಲು ಅನುಕೂಲವಾಗುವಂತೆ ನೆರಳು ಇರುವ ಪ್ರದೇಶವನ್ನು ಮಾಲೀಕರು ಒದಗಿಸುವುದು ಅಥವಾ ನೌಕರರು ಮತ್ತು ಕಾರ್ಮಿಕರಿಗೆ ಕೆಲಸದ ಸಮಯವನ್ನು ಕಾರ್ಮಿಕರೊಂದಿಗೆ ಸಮಾಲೋಚಿಸಿ ಮರು-ನಿಗದಿಪಡಿಸಿಕೊಳ್ಳುವುದು. ಕೆಲಸದ ಸ್ಥಳದ ಬಳಿ ವಿಶ್ರಾಂತಿ ವಡೆಯಲು ಗಾಳಿ ಬೆಳಕು ಮತ್ತು ಕುಡಿಯುವ ನೀರಿನ ವ್ಯವಸ್ಥೆಯೊಂದಿಗೆ ತಾತ್ಕಾಲಿಕ ಶೆಡ್ ಗಳನ್ನು ಮಾಲೀಕರು ನಿರ್ಮಿಸತಕ್ಕದ್ದು.
ಕಾರ್ಮಿಕರಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹೊರಡಿಸಿದ ಆರೋಗ್ಯ ಸಲಹೆಯನ್ನು ಅನುಸರಿಸಿ, ಕಾರ್ಮಿಕರ ನಿಯಮಿತ ಆರೋಗ್ಯ ತಪಾಸಣೆಯನ್ನು ಖಚಿತವಡಿಸಿಕೊಳ್ಳಲು ಆರೋಗ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವುದು. ಕೆಲಸದ ಸಮಯದಲ್ಲಿ ಕಾರ್ಮಿಕರು ಆದಷ್ಟು ಹತ್ತಿಯ ಮತ್ತು ಶ್ವೇತ ವರ್ಣದ ತುಂಬು ತೋಳಿನ ಅಂಗಿ/ಬಟ್ಟೆ ಮತ್ತು ಟೋಪಿ, ಕೂಲಿಂಗ್ ಗ್ಲಾಸ್ ಧರಿಸಬೇಕು.
ಒಳಾಂಗಣದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಂಬAಧಿಸಿದAತೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಮಾಲೀಕರು ತೆಗೆದುಕೊಳ್ಳುವುದು(use window shades, fanning and cross ventilation, Artificial Humidification)
ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವAತೆ ನೋಡಿಕೊಂಡು ವ್ಯಕ್ತಿಗೆ ತಣ ್ಣÃರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕಗಳನ್ನು ಉಪಯೋಗಿಸುವುದು. ಹೀಟ್ ಸ್ಟ್ರೋಕ್ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.