ರಾಯಚೂರು,ಮಾ.31,(ಕ.ವಾ):- ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಭಾಷೆಯಲ್ಲಿ ಜಿಲ್ಲೆಯ 29,888 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಅದರಲ್ಲಿ 28,906 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 981 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ರಾಯಚೂರು ತಾಲೂಕಿನಲ್ಲಿ 8,538 ವಿದ್ಯಾರ್ಥಿಗಳು ಹಾಜರಾಗಿದ್ದು, 616 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದೇವದುರ್ಗ ತಾಲೂಕಿನಲ್ಲಿ 3,762 ಹಾಜರಾಗಿದ್ದು, 37 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು ತಾಲೂಕಿನ 6,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 152 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಾನವಿ ತಾಲೂಕಿನ 5,190 ಹಾಜರಾಗಿದ್ದರೆ 63 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಿಂಧನೂರು ತಾಲೂಕಿನಲ್ಲಿ 5,366 ವಿದ್ಯಾರ್ಥಿಗಳು ಹಾಜರಾಗಿದ್ದು, 113 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಾಹಿತಿ ನೀಡಿದೆ.