ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಇದು ನಿಜಾನಾ….?
ಬೆಂಗಳೂರು. ಅಕ್ಟೋಬರ್ 05. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಾಲುಮರದ ತಿಮ್ಮಕ್ಕಳ ಕುರಿತು ಹಲವು ಸಾಮಾಜಿಕ ಜಾಲತಾಣಗಳಲ್ಲಿ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಇನ್ನಿಲ್ಲ ರೀಪ್ ಶ್ರದ್ಧಾಂಜಲಿ ಓಂ ಶಾಂತಿ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಹೀಗೆ ಇನ್ನಿತರ ಪೋಸ್ಟರ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಇವಲ್ಲ ನಿಜಾನಾ ಅಥವಾ ಸುಳ್ಳು ಎಂಬುದಕ್ಕೆ ಇಲ್ಲಿದೆ ನಿಮಗೆ ಸಂಪೂರ್ಣವಾದ ಮಾಹಿತಿ.
ಸಾಲುಮರದ ತಿಮ್ಮಕ್ಕಳ ಆರೋಗ್ಯ ಸ್ಥಿರವಾಗಿದೆ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ವೈದ್ಯರ ಚಿಕಿತ್ಸೆಗೆ ಸ್ಪಂದನೆ ಕೂಡ ನೀಡುತ್ತಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ ನಿಧಾನ ಅನ್ನೋ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಮತ್ತು ಹರಡಬೇಡಿ ದಯವಿಟ್ಟು ಸಹಕರಿಸಿ ಎಂದು ಸಾಲುಮರದ ತಿಮ್ಮಕ್ಕಳ ದತ್ತು ಮಗ ಉಮೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸಾಲುಮರದ ತಿಮ್ಮಕ್ಕ ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದಾಳೆ. ಓದುಬರಹ ಇಲ್ಲದ ತಿಮ್ಮಕ್ಕ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.