ರಾಯಚೂರು ಅ.01 ಒಕ್ಕಲಿಗ ಸಮುದಾಯದವರಿಗೆ ಸ್ವಯಂ ಉದ್ಯೋಗ ಮಾಡಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.೨೦ ರಷ್ಟು ಗರಿಷ್ಠ ರೂ.೧.೦೦ ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.
ನಿಗಮವು ಅನುಷ್ಟಾನಗೊಳಿಸುವ ಈ ಯೋಜನೆಗಳಲ್ಲಿ ಶಾಸಕರು/ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಹಾಗೂ ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in)ನಲ್ಲಿ, ಗ್ರಾಮಒನ್ (http://gramaone.karnataka.gov.in), ಬೆಂಗಳೂರು ಒನ್ (https://www.karnatakaone.gov.in)
ಹಾಗೂ ಕರ್ನಾಟಕ ಒನ್(https://k1app.karnatakaone.gov.in) ಗಳ ಮೂಲಕ ಅನ್ಲೈನ್ನಲ್ಲಿ ಮತ್ತು ಕ್ರಮಸಂಖ್ಯೆ ೫ ರಲ್ಲಿನ ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ ನಲ್ಲಿ ಅರ್ಜಿಯನ್ನು ಅ. ೩೦ರ ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ /https://kvcdc.karnataka.gov.in ಅಥವಾ ನಿಗಮದ ದೂ. ಸಂ: ೦೮೦-೨೯೯೦೪೩೫೦, ೨೯೯೦೪೨೬೮ ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ನಂ: ೧-೧-೧೫೮, ಉದಯನಗರ, ಕರ್ನಾಟಕ ಗ್ರಾಮೀಣ ಬ್ಯಾಂಕ ಹಿಂಭಾಗ, ಉಮಾ ಹೋಟೆಲ್ ಹತ್ತಿರ, ಸ್ಟೇಶನ ರೋಡ್, ರಾಯಚೂರು (ದೂರವಾಣಿ ಸಂ: ೦೮೫೩೨-೨೫೦೪೪೦) ರವರ ಕಚೇರಿಯವರನ್ನು ಸಂಪರ್ಕಿಸಬಹುದೆಂದು ಕನಾರ್ಟಕ ಮರಾಠ ಸಮುದಾಯಗಳು, ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.