ರಾಯಚೂರು ಜೂನ್ 20. ಶ್ರೀ ಕೃಷ್ಣ ಅವರನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ರಾಯಚೂರು ಉಪ ನಿರ್ದೇಶಕರನ್ನಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಅವರಿಂದ ನೇಮಕ.
ಸಾರ್ವತ್ರಿಕ ಲೋಕ ಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 437/6/1/INST/FUNCT/MCC/2023, ದಿನಾಂಕ :21.12.2023 ರನ್ವಯ ಸಮ ಸಂಖ್ಯೆಯ ಅಧಿಸೂಚನೆ ದಿನಾಂಕ:14.02.2024ರಲ್ಲಿ ವರ್ಗಾಯಿಸಲಾಗಿದ್ದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ರಾಯಚೂರು ಉಪ ನಿರ್ದೇಶಕರು ಶ್ರೀ ಕೃಷ್ಣ ಅವರನ್ನು ಸಾರ್ವತ್ರಿಕ ಲೋಕ ಸಭಾ ಚುನಾವಣೆ -2024 ಮುಕ್ತಾಯಗೊಂಡಿರುವುದರಿಂದ ಸದರಿ ಅಧಿಕಾರಿಗಳು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸ್ಥಳ/ಹುದ್ದೆಗಳಿಗೆ ಮರು ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಬೆಂಗಳೂರು ಇವರು ಆದೇಶ ಹೊರಡಿಸಿದ್ದಾರೆ.