ಸಿಂಧನೂರು.ಡಿ.10
ಸಿAಧನೂರು ತಾಲೂಕಿನ ಆರ್.ಎಚ್.ಕ್ಯಾಂಪ್ ನಂ.1 ಗ್ರಾಮ ಪಂಚಾಯಿತಿ ಪಿಡಿಒ ಪೂರ್ಣಿಮಾ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೋಮವಾರ ಆದೇಶಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರದ ಕುರಿತು ನಮ್ಮ ‘ಬಡವರ ಬಾರುಕೋಲು’ ಸುದ್ದಿ ಮಾಧ್ಯಮ ಕಳೆದ ಆಗಸ್ಟ್ 23ರಂದು ‘ನಂ. ಗ್ರಾಮ ಪಂಚಾಯಿತಿಯ ನಂ.1 ಹಗರಣಗಳು’ ಶೀರ್ಷಿಕೆಯಡಿ ಸರಣಿ ವರದಿಗಳನ್ನು ಪ್ರಸಾರ ಮಾಡಿ, ಸರ್ಕಾರದ ಕೋಟ್ಯಂತರ ರೂಪಾಯಿ ಅನುದಾನ ಹೇಗೆಲ್ಲಾ ದುರ್ಬಳಕೆಯಾಗಿದೆ ಎಂಬ ಬಗ್ಗೆ ಎಳೆ ಎಳೆಯಾಗಿ ಸಾರ್ವಜನಿಕರ ಮುಂದೆ ಬಿಚ್ಚಿಟ್ಟಿತ್ತು. ಇದರಿಂದ ಎಚ್ಚೆತ್ತ ಮೇಲಧಿಕಾರಿಗಳು, ಪಿಡಿಒ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.