ರಾಯಚೂರು.ಅ.೧೩(ಕ.ವಾ):- ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃರಿ ಮೂಡಿಸುವ ಏಕೈಕ ಮಾರ್ಗವೆಂದರೇ ಅದು ಸುದ್ದಿ ಮಾಧ್ಯಮವಾಗಿದೆ. ಆದ್ದರಿಂದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮುಟ್ಟಿಸುವಲ್ಲಿ ಮಾಧ್ಯಮಗಳ ಪಾತ್ರ ಅಪಾರವಾದದ್ದು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ಅವರು ಅ.೧೩ರ(ಶುಕ್ರವಾರ) ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಜ್ಞಾನ ಕೇಂದ್ರದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಾರ್ತಾ ಲಾಪ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಇಲಾಖೆ, ವಾರ್ತಾ ಶಾಖೆ ಬೆಂಗಳೂರು ಅವರಿಂದ ಮಾಧ್ಯಮದವರಿಗೆ ವಾರ್ತಾಲಾಪ ಎಂಬ ವಿಶೇಷವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಮಾಧ್ಯಮದವರಿಗೆ ಸರ್ಕಾರದ ವಿವಿಧ ಯೋಜನೆಗಳು, ಅವುಗಳ ಉದ್ದೇಶವನ್ನು ತಿಳಿಸುತ್ತಿದ್ದು, ಇದರಿಂದ ಜನರಿಗೆ ಪರಿಣಾಮಕಾರಿಯಾಗಿ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಿದಂತಾಗುತ್ತದೆ ಎಂದು ಹೇಳಿದರು.
ಸರ್ಕಾರದಿಂದ ಕೈಗೊಳ್ಳಲಾದ ಯೋಜನೆಗಳು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬAಧಪಟ್ಟAತೆ ಮತ್ತು ಯೋಜನೆಗಳಲ್ಲಿರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವ ಮತ್ತು ಸರ್ಕಾರದ ಯೋಜನೆಗಳ ಲಾಭಗಳನ್ನು ಜನರಿಗೆ ಮುಟ್ಟಿಸುವಲ್ಲಿ ಮಾಧ್ಯಮಗಳು ಹೆಚ್ಚಿನ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಭಾರತ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು ಕಾರ್ಯಗಾರದಲ್ಲಿ ಸಂಪೂರ್ಣ ಮಾಹಿತಿಗಳನ್ನು ಮಾಧ್ಯಮದವರಿಗೆ ತಿಳಿಸಬೇಕು ಮತ್ತು ಯೋಜನೆಗಳ ಉದ್ದೇಶದ ಕುರಿತು ಹೆಚ್ಚಿನ ಕಾಳಜಿಯಿಂದ ಮಾಹಿತಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇದೇ ವೇಳೆ ಭಾರತ ಸರ್ಕಾರದ ವಾರ್ತಾ ಶಾಖೆಯ ಉಪನಿರ್ದೇಶಕ ಎಸ್.ಪ್ರಕಾಶ ಮಾತನಾಡಿ, ಸರ್ಕಾರದ ಯೋಜನೆಗಳ ಕುರಿತು ಆಯಾ ಇಲಾಖೆಯ ಅಧಿಕಾರಿಗಳಿಂದ ಪಡೆದ ಮಾಹಿತಿಯನ್ನು ತಿಳಿದುಕೊಂಡ ಪತ್ರಕರ್ತರು ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ವಾರ್ತಾಲಾಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪಿಐಬಿ ಮತ್ತು ಆರ್ಎನ್ಐ ಕುರಿತು ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿ ಹೇಮಲತಾ, ಭಾರತ ಸರ್ಕಾರದ ವಾರ್ತಾ ಶಾಖೆಯ ಸಹಾಯಕ ನಿರ್ದೇಶಕಿ ಅನಖಾ, ರಾಯಚೂರು ರಿಪೋರ್ಸ್ ಗೀಲ್ಡ್ ಅಧ್ಯಕ್ಷ ಚನ್ನಬಸವಣ್ಣ, ಸಂಪಾದಕ ಸಂಘದ ಅಧ್ಯಕ್ಷ ಪಿ.ಚನ್ನವಸವ ಬಾಗಲವಾಡ, ವಾರ್ತಾ ಶಾಖೆಯ ಬಳ್ಳಾರಿ ಕ್ಷೇತ್ರ ಪ್ರಚಾರಾಧಿಕಾರಿ ರಾಮಕೃಷ್ಣ, ವಿಜಯಪುರ ಕ್ಷೇತ್ರ ಪ್ರಚಾರಾಧಿಕಾರಿ ಸಿ.ಕೆ ಸುರೇಶ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ.ವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ, ಯೋಜನಾ ವಿಭಾಗದ ಕಾರ್ಯಪಾಲ ಅಭಿಯಂತರರಾದ ಮೇನಕಾ ಪಟೇಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಉಪ್ಪು ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.