ಬೆಂಗಳೂರು ಏಪ್ರಿಲ್ 16. ತಮ್ಮ ಅತ್ಯುತ್ತಮ ನಟನೆ, ಆಕರ್ಷಕ ವ್ಯಕ್ತಿತ್ವದ ಮೂಲಕ ಕನ್ನಡಿಗರ ಮನೆಮಗನಾಗಿ, ಕನ್ನಡಿಗರನ್ನು ರಂಜಿಸಿದ್ದ ಖ್ಯಾತ ನಟ ದ್ವಾರಕೀಶ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಇಡೀ ಚಿತ್ರರಂಗವೇ ಸ್ತಬ್ಧವಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.1942ರ ಆಗಸ್ಟ್ 19, ರಂದು ಶಾಮರಾವ್ ಮತ್ತು ಜಯಮ್ಮ ದಂಪತಿ ಪುತ್ರನಾಗಿ ಮೈಸೂರಿನ ಹುಣಸೂರಿನಲ್ಲಿ ಜನಿಸಿದ ಅವರು 1963 ರಲ್ಲಿ ಕನ್ನಡ ಚಿತ್ರರಂಗಕ್ಕೆ ಬಂದಿದ್ದರು.
1966 ರಲ್ಲಿ ಡಾ.ರಾಜ್ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಚಿತ್ರವನ್ನು ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಅಧ್ಯಾಯ ಬರೆದಿದ್ದರು. ಚಿತ್ರರಂಗದಲ್ಲಿ ಅವರು ಹಲವಾರು ಏಳುಬೀಳುಗಳನ್ನು ಕಂಡು ದಾಖಲೆಗಳನ್ನೇ ನಿರ್ಮಿಸಿದ್ದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಆಪ್ತಮಿತ್ರ, ಗುರು-ಶಿಷ್ಯರು, ಕಳ್ಳ ಕುಳ್ಳ, ಆಪ್ತಮಿತ್ರ,ಕುಳ್ಳ ಏಜೆಂಟ್, ಬ್ರಹ್ಮಗಂಡು ಹತ್ತು ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ ಜೊತೆಗೆ ಡಾ.ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ರವಿಚಂದ್ರನ್ ನಟರು ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ದ್ವಾರಕೀಶ್ ಅವರ ನಿಧನಕ್ಕೆ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದಾರೆ.