ರಾಯಚೂರು,ಏ.24(ಕ.ವಾ):- ಸಂವಿಧಾನ ಜಾರಿಯಾದ ನಂತರ ದೇಶದ ಪ್ರತಿಯೊಬ್ಬರಿಗೆ ಮತದಾನದ ಹಕ್ಕನ್ನು ನೀಡಲಾಗಿದ್ದು, ಮತದಾನದ ಹಕ್ಕು ವಿಶೇóವಾದ ಮತ್ತು ಅಷ್ಟೇ ಜವಾಬ್ದಾರಿಯುತವಾದ ಹಕ್ಕಾಗಿದ್ದು, ಪ್ರತಿಯೊಬ್ಬರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಡ್ಡಯವಾಗಿ ಮತದಾನ ಮಾಡಬೇಕೆಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾದೀಶರೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮಾರುತಿ ಬಗಾಡೆ ಅವರು ಹೇಳಿದರು.
ಅವರುಏ.21ರ(ಶುಕ್ರವಾರ) ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡಬೇಕು. ಸಂವಿಧಾನ ಜಾರಿಗೆ ಬಂದ ಮೇಲೆ ನಮಗೆ ಮತದಾನ ಮಾಡುವ ಹಕ್ಕನ್ನು ನೀಡಲಾಗಿದೆ. ಮತದಾನದ ಕಾರ್ಯ ಪವಿತ್ರವಾದ ಕಾರ್ಯ ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ಬಲಗೊಳಿಸಬೇಕು.
ಮತಗಟ್ಟೆಯಲ್ಲಿ ವಿವಿಧ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅಂಗವಿಕಲರಿಗಾಗಿ ಮಹಿಳೆಯರಿಗಾಗಿ ಮತ್ತು ಹಿರಿಯ ನಾಗರಿಕಗಾಗಿ ಸೌಲಭ್ಯಗಳ ವ್ಯವಸ್ಥೆಯನ್ನು ಮಾಡಲಾಗುತ್ತದೆ .ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಹೇಳಿದರು.
ಜಿಲ್ಲಾ ಚುನಾವಣಾಧಿಕಾರಿ, ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ್ ಅವರು ಮಾತನಾಡುತ್ತಾ ರಾಯಚೂರು ಜಿಲ್ಲೆಯಲ್ಲಿ ಕಳೆದ ಸಲ ಮತದಾನ ಶೇಕಡವಾರು ಕಿಂತಲೂ ಈ ಸಲದ ಮತದಾನ ಅತಿ ಹೆಚ್ಚು ಆಗಬೇಕು ಎಂದು ಹೇಳಿದರು. ನಂತರ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧನೆ ಮಾಡಿದರು.
ಇದೇ ವೇಳೆ ಜಿಲ್ಲಾ ಸ್ವಿಪ್ ಸಮಿತಿಯ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೆರ ಮಾತನಾಡಿ, ಮುಂಬರುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಲವಾರು ಕಾರ್ಯಕ್ರಮಗಳನ್ನು ಆಯೋಜನೆಯನು ಮಾಡಲಾಗುತ್ತದೆ. ಕಳೆದ ಸಲ ಕಡಿಮೆ ಮತದಾನ ಆದಂತ ಮತಗಟ್ಟೆಗಳಿಗೆ ಹೆಚ್ಚು ಒತ್ತುನಿಡಲಾಗುತ್ತದೆ. ಜನಸಾಮಾನ್ಯರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಹಲವಾರು ಯೋಜನೆಗಳನ್ನು ಹಾಕಿಕೊಂಡು ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಕೂಡು ವಕ್ಕಲಿಗರ್.ಎಂ.ಜಿ, ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾದೀಶರಾದ ಜಗದೀಶ್ವರ.ಎಂ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಶಪ್ಪ ಪೂಜಾರಿ, ರಾಯಚೂರು ತಾಲೂಕು ಪಂಚಾಯತ್ ಇಒ ರಾಮರೆಡ್ಡಿ ಪಾಟೀಲ್, ಅಣ್ಣಾರಾವ, ವೀರೇಶ್ ನಾಯಕ್, ದಂಡಪ್ಪ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.