ಏಪ್ರಿಲ್ 21.ಸಾಮಾನ್ಯವಾಗಿ ಸಾಮಾಜಿಕ ನಾಟಕಗಳು ಎಂದರೆ ಕುಣಿದು ಕುಪ್ಪಳಿಸುವ ನಾಟಕಗಳನ್ನು ಆಡುವುದು ಈಗಿನ ಟ್ರೆಂಡ್ ಆಗಿ ಮಾರ್ಪಟ್ಟಿದೆ.ಉತ್ತರ ಕರ್ನಾಟಕ ಅಂದರೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಕಲಾವಿದರು ಮತ್ತು ನಾಟಕ ಅಭಿಮಾನಿಗಳು ಇದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ನಾಟಕಗಳು ಕಣ್ಮರೆಯಾಗುತ್ತಿವೆ.
ಆದರೆ ಶ್ರೀ ಹಳ್ಳಿ ಬಸವೇಶ್ವರ ಯುವಕ ಮಂಡಳಿ ವತಿಯಿಂದ ದಿನಾಂಕ 23-4-2023 ರಂದು ಭೂತಲದಿನ್ನಿ ಗ್ರಾಮದಲ್ಲಿ ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ಆಧಾರಿತ ಜಗ ಮೆಚ್ಚಿದ ಜಂಗಮ ಎಂಬ ಭಕ್ತಿ ಪ್ರಧಾನ ನಾಟಕವನ್ನು ಪ್ರದರ್ಶಿಸಲಿದ್ದಾರೆ ಕಾರಣ ನಾಡಿನ ಸಮಸ್ತ ಜನರು ಈ ನಾಟಕದಲ್ಲಿ ಭಾಗವಹಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಈ ನಾಟಕದಲ್ಲಿ ಶ್ರೀ ಶಿವಕುಮಾರ ಸ್ವಾಮಿಜಿ ಶಿದ್ದಗಂಗಾ ಮಠದ ಜೀವನ ಚರಿತ್ರೆ ಆಧಾರಿತ & ಮಠ ಮೊದಲಿಂದ ಹೇಗೆ ನಡೆಸಿಕೊಂಡು ಬಂತು ಬರಿ ಜೋಳಿಗೆಯನ್ನು ಕೊಟ್ಟು ಶಿವಕುಮಾರ ಸ್ವಾಮಿಗಳಿಗೆ ಮಠವನ್ನು ಮುಂದುವರಿಸಿಕೊಂಡು ಹೋಗಲು ಹೇಳಿದಾಗ ಜೋಳಗಿಯನ್ನು ತೆಗೆದುಕೊಂಡು ಮಠವನ್ನು ಇಲ್ಲಿಯವರೆಗೆ ಹೇಗೆ ನಡೆಸಿಕೊಂಡು ಬಂದಿದ್ದಾರೆ ಎಂಬುವುದು ಈ ನಾಟಕದ ಸಾರಾಂಶ ಎಂದು ಕಲಾವಿದರು ತಿಳಿಸಿದ್ದಾರೆ.
ಶ್ರೀಗಳ ಬಗ್ಗೆ ಕಿರು ಪರಿಚಯ
ಶಿವಕುಮಾರ ಸ್ವಾಮಿ ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ ದೇವರು ಎಂದು ಕೂಡ ಉಲ್ಲೇಖಿಸಲಾಗಿದೆ.ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಅವರಿಗೆ ಭಾರತ ಸರ್ಕಾರವು ೨೦೧೫ ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿದೆ.
ಶ್ರೀ ಶಿವಕುಮಾರ ಸ್ವಾಮಿಜಿಗಳು ಸಿದ್ದಗಂಗಾ ಶಿಕ್ಷಣ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ದೇಶದ ಅಸಂಖ್ಯಾತ ಭಕ್ತವರ್ಗ ತತ್ವಜ್ಞ್ಯಾನ ಕಾಯಕವೇ ಕೈಲಾಸ ಪ್ರಶಸ್ತಿಗಳು/ಬಿರುದುಗಳು ಕರ್ನಾಟಕ ರತ್ನ ಪದ್ಮಭೂಷಣ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಆದುನಿಕ ಬಸವಣ್ಣ, ನುಡಿ ಕಾಯಕವೇ ಕೈಲಾಸ ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧೨ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು. ಮಾರ್ಚ್ ೩, ೧೯೩೦ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದರು
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದರು ಶ್ರೀಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಬೇಕೆಂದರೆ ಈ ನಾಟಕವನ್ನು ನೋಡಿ ನೋಡದೆ ಮರೆಯದಿರಿ.