ಮೇ. 07 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಜಿದ್ದಾಜಿದ್ದಿನ ಪ್ರಚಾರ ನಡೆಸುತ್ತಿದ್ದು ಆದರೆ ಈ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ದಿನಾಂಕ 8.5.2023 ಅಂದರೆ ಸೋಮವಾರ ಸಂಜೆ 6 ಕ್ಕೆ ಕಡಿವಾಣ ಬೀಳಲಿದ್ದು, ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾದ, ಬಳಿಕ ಮನೆ ಮನೆಗೆ ಹೋಗಿ ಮತಯಾಚನೆ ಮಾಡಬೇಕು.
ಬಹಿರಂಗ ಪ್ರಚಾರ ಅಂತ್ಯವಾದ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಘೋಷಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಸ್ಟಾರ್ ಪ್ರಚಾರಕರು, ಮುಖಂಡರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದಿಂದ ನಡೆಯುವ ಸಡಗರ ಪ್ರಚಾರಗಳೆಲ್ಲವು ಸೋಮವಾರ ಸಂಜೆ 6 ಗಂಟೆಗೆ ಮುಗಿಸಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಹೋಗಿ ಪ್ರಚಾರ ಕೈಗೊಂಡು ಸಮಯ ಸಂಜೆ 6 ಗಂಟೆ ಒಳಗೆ ಮುಗಿಸಬೇಕು.
ಒಂದು ವೇಳೆ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಸಹ ಬಳಕೆ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗವು ಆದೇಶಿಸಿದೆ.