ಏಪ್ರಿಲ್ 07. ಭತ್ತದ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಮಹಾ ತಪಸ್ವಿ ಯಡಿಯೂರು ಸಿದ್ದಲಿಂಗೇಶ್ವರರ 30ನೇ ಪುರಾಣ ಮಹೋತ್ಸವ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು.
ನಂತರ ಪತ್ರಿಕೆ ಜೊತೆ ಮಾತನಾಡಿದ ಉಪನ್ಯಾಸಕರಾದ ಪರಶುರಾಮ್ ಮಲ್ಲಾಪುರ್ ಶ್ರೀ ಸಿದ್ಧಲಿಂಗೇಶ್ವರರು ಜನಿಸಿದ್ದು ಚಾಮರಾಜ ನಗರ ಜಿಲ್ಲೆಯ ಅದೇ ತಾಲೂಕಿನ ಹರದನ ಹಳ್ಳಿ ಎಂಬ ಗ್ರಾಮದಲ್ಲಿ ಮಲ್ಲಿಕಾರ್ಜುನ ಮತ್ತು ಜ್ಞಾನಾಂಬೆ ಎಂಬ ಶಿವ ಶರಣ ದಂಪತಿಗಳಿಗೆ ವಿವಾಹವಾಗಿ ಬಹಳ ಕಾಲಗಳು ಉರುಳಿದರೂ ಸಂತಾನ ಭಾಗ್ಯವಿರಲಿಲ್ಲ. ಇದಕ್ಕಾಗಿ ನಿತ್ಯವೂ ಭಕ್ತಿ ಭಾವಗಳಿಂದ ಶಿವನನ್ನು ಪ್ರಾರ್ಥಿಸುತ್ತಾ , ಅತಿಥಿ, ಯೋಗಿಗಳ ಸೇವೆಯನ್ನು ಶ್ರದ್ಧಾ ಭಕ್ತಿಗಳಿಂದ ಮಾಡಿಕೊಂಡು ಜೀವನ ನಡೆಸಿಕೊಂಡು ಹೋಗುವಾಗಲೇ ಅವರಿಗೆ ಸಿದ್ಧಲಿಂಗೇಶ್ವರರ ಜನನವಾಗಿರುತ್ತದೆ.
ಎಡೆಯೂರಿನ ಶ್ರೀ ತೋಂಟದ ಸಿದ್ಧಲಿಂಗೇಶ್ವರರು ಕನ್ನಡ ನಾಡು ಕಂಡ ಅನುಭಾವಿ ಸಂತ ಶರಣರಲ್ಲಿ ಪ್ರಮುಖರು. ೧೬ನೇ ಶತಮಾನದ ಆಸು ಪಾಸು ಸಿದ್ಧಲಿಂಗೇಶ್ವರರು ಜೀವಿಸಿದ್ದ ಕಾಲ ಮಾನ ಹೊಯ್ಸಳರು ರಾಜ್ಯವಾಳುತ್ತಿದ್ದ ಕಾಲಕ್ಕೆ ಈಗಿನ ಹರದನಹಳ್ಳಿಯನ್ನು ತಮ್ಮ ಎರಡನೇ ರಾಜಧಾನಿಯಂತೆ ನಡೆಸಿಕೊಳ್ಳುತ್ತಿದ್ದರು ಹಾಗು ಈ ಪ್ರದೇಶಕ್ಕೆ ಎಣ್ಣೆನಾಡು ಎಂದು ಕರೆಯಲಾಗುತ್ತಿತ್ತು. ವಿವಿಧ ದಾಖಲೆಗಳು ಲಭ್ಯವಾಗಿರುವ ಪ್ರಕಾರ ಇದೇ ಪ್ರದೇಶವನ್ನು ‘ಮಗ್ಗೇಯ ಮಾರ್ಗೆಯ್ ವಾಣಿಜ್ಯ ಪುರಿ ಎಂಬ ಹೆಸರುಗಳಿಂದಲೂ ಕರೆಯಲಾಗಿದೆ. ಆದರೆ ಎಲ್ಲಕ್ಕೂ ಮುಂಚಿನ ದಾಖಲೆ ಮೂರನೇ ಬಲ್ಲಾಳನ ಕ್ರಿ.ಶ ೧೩೪೫ ರ ಶಾಸನದಲ್ಲಿ ಈ ಹಳ್ಳಿಯನ್ನು ಮಗ್ಗೇಯ ಎಂದು ಹೆಸರಿಸಲಾಗಿದೆ. ಆದರೆ ಆದೇ ಸಮಯದ ಇನ್ನೊಂದು ತಾಮ್ರದ ಶಾಸನ ಅಡೆ ಹಳ್ಳಿಯನ್ನು ‘ವಾಣಿಜ್ಯ ಪುರಿ’ ಎಂದೂ ಸಂಭೋದಿಸಿದೆ. ‘ವಾಣಿಜ್ಯ ಪುರಿ’ ಎಂಬುದು ಸಂಸ್ಕೃತ ಪದವಾಗಿದ್ದು ಅದರದ್ದೇ ಕನ್ನಡ ಪದ ‘ಹರದನ ಹಳ್ಳಿ’ಯೂ ಚಾಲ್ತಿಯಲ್ಲಿತ್ತು. ಹರದ ಎಂದರೆ ವ್ಯಾಪಾರಿ ಎಂದರ್ಥ.ಶೈವ ಸಮುದಾಯದ ವ್ಯಾಪಾರಿಗಳನ್ನು ಆ ಪ್ರದೇಶದಲ್ಲಿ ‘ವಾಣಿಜ’ ರು ಎಂದು ಕರೆಯಲಾಗುತ್ತಿತ್ತು. ಇವರ ವ್ಯಾಪಾರ ಪ್ರಮುಖವಾಗಿ ತಮಿಳುನಾಡಿನೊಂದಿಗೆ ಇರುತ್ತಿತ್ತು, ಆದರಿಂದ ಈ ಹಳ್ಳಿಗೆ ಹರದನ ಹಳ್ಳಿ ಎಂದು ಹೆಸರು ಬಂದಿರಬಹುದು ಎಂದೂ ಮಾತು ಇದೆ.
ವೀರಶೈವ ಪಂಥದಲ್ಲಿ ಹರದನಹಳ್ಳಿ ಬಹು ಮುಖ್ಯವಾದದ್ದು. ವೀರಶೈವ ಮಠ ಗಳಲ್ಲಿ ಒಂದಾದ ಶೂನ್ಯ ಸಿಂಹಾಸನ ಪರಂಪರೆಯ ನಿರಂಜನ ಪೀಠ ಈ ಹರದನಹಳ್ಳಿಯ ಮೂಲದ್ದೇ ಆ ಮಠ ಜನ ಸಾಮಾನ್ಯರಿಂದ ಹರದನಹಳ್ಳಿ ಮಠವೆಂದೇ ಕರೆಸಿಕೊಳ್ಳುತ್ತದೆ. ಅನಾದಿ ಜ್ಞಾನೇಶ್ವರರು ಈ ಮಠದ ಪ್ರಥಮ ಪೀಠಾಧಿಪತಿಗಳು. ಇವರು ಶೂನ್ಯ ಸಿಂಹಾಸನದ ನಾಲ್ಕನೇ ಪೀಠಾಧಿಪತಿಗಳೂ ಹೌದು. ಅಲ್ಲಮಪ್ರಭು, ಚನ್ನಬಸವಣ್ಣ ಹಾಗು ಸೊನ್ನಲಿಗೆ ಸಿದ್ಧರಾಮರು ಅಲಂಕರಿಸಿದ ಶೂನ್ಯ ಪೀಠವನ್ನು ಅಲಂಕರಿಸಿದ್ದ ನಾಲ್ಕನೇ ಶೂನ್ಯ ಸಿಂಹಾಸನಾಧ್ಯಕ್ಷರು. ಇದೇ ಮಠದ ಪರಂಪರೆಯನ್ನು ಇದೀಗ ನಾವು ಕುಂತೂರು, ಸಾಲೂರು, ಗುಬ್ಬಿ,ಸಿದ್ದಗಂಗೆ ಹಾಗು ಎಡೆಯೂರುಗಳಲ್ಲಿ ಕಾಣಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ವೀರಗಾಸೆ ಕಲಾವಿದರಾದ ಬಸುವರಾಜ್ ತಾವರಗೇರಾ ಹಿರಿಯರಾದ ವೆಂಕನಗೌಡ ಪೊಲೀಸ್ ಪಾಟೀಲ್, ರೆಡ್ಡಿ ಜುಲಾದ್, ಮಲ್ಲಿಕಾರ್ಜುನ್ ಕಾರಿಗಿನೂರು, ಪಂಪನಗೌಡ ಪೊಲೀಸ್ ಪಾಟೀಲ್, ಸಿದ್ದರಾಮೇಶ್ ಹಡಪದ ಪರಶುರಾಮ ಮಲ್ಲಾಪುರು ಅಮರೇಗೌಡ ಮಲ್ಲಾಪುರು ಮಹಿಳೆಯರು ಯುವಕರು ಕಲಾವಿದರು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ನೆರವೇರಿದ್ದರು.